Kannada NewsKarnataka NewsLatestPolitics

*ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಸಚಿವರ ಹೇಳಿಕೆ

ಪ್ರಗತಿವಾಹಿನಿ ಸುದ್ದಿ: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Home add -Advt

ಬೆಂಗಳೂರಿನ ಲಗ್ಗೆರೆಯ ಬಸವೇಶ್ವರ ಭವನದಲ್ಲಿ ಕಾಂಗ್ರೆಸ್ ಮುಖಂಡರಾದ ಲಗ್ಗೆರೆ ನಾರಾಯಣಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾಗಿದ್ದ 208 ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಮಹಿಳೆ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವಷ್ಟರ ಮಟ್ಟಿಗೆ ಇಂದು ಬೆಳೆದಿದ್ದಾಳೆ ಎಂದರು.

ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಂಥ, ಉತ್ತಮ ಆರೋಗ್ಯದ ಮಗುವಿಗೆ ಜನ್ಮ ನೀಡಿ ಎಂದು ಹಾರೈಸಿದ ಸಚಿವರು, ನಮ್ಮ ಇಲಾಖೆ ಮೂಲಕ, ಮಹಿಳೆ ಗರ್ಭಿಣಿ ಆದ ಬಳಿಕ, ಹುಟ್ಟುವ ಮಗುವಿಗೆ 6 ವರ್ಷದವರೆಗೂ ಸರ್ಕಾರವೇ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ. ಗರ್ಭಿಣಿ ಹಾಗೂ ಮಗುವಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಹೇಳಿದರು.

Related Articles

Back to top button