Kannada NewsKarnataka NewsLatest

*ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಅಪಘಾತ: 10 ಪ್ರಯಾಣಿಕರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಮೊದಲು ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಅಪಘಾತಕ್ಕೀಡಾಗಿ ನಿಂತಿದ್ದ ಬಸ್ ಗಳಿಗೆ ಮತ್ತೊಂದು ಬಸ್ ಬಂದು ಗುದ್ದಿದೆ.

Home add -Advt

ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಹತ್ತು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಅವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಮಳವಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Related Articles

Back to top button