Latest

ಸೋತವರಿಗೂ ಸಚಿವ ಸ್ಥಾನ; ನಮ್ಮನ್ನು ಯಾಕೆ ಆಯ್ಕೆ ಮಾಡ್ಬೇಕು ಎಂದು ಸಿಎಂಗೆ ಶಾಸಕನ ಪ್ರಶ್ನೆ

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಸೋತವರಿಗೂ ಸಚಿವ ಸ್ಥಾನ ನೀಡುವುದು ನನ್ನ ಪ್ರಕಾರ ಸರಿಯಲ್ಲ. ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಮಂತ್ರಿ ಸ್ಥಾನ ನೀಡುವುದು ಸೂಕ್ತ. ಸೋತವರಿಗೂ ಸಚಿವ ಸ್ಥಾನ ನೀಡುವುದಾದರೆ ಜನರು ನಮ್ಮನ್ನು ಯಾಕೆ ಆಯ್ಕೆ ಮಾಡಬೇಕು ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ, ಸಿಎಂ ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ದಾವಣಗೆರೆ ಜಿಲ್ಲೆಗೂ ಸಚಿವ ಸ್ಥಾನ ನೀಡಬೇಕು. ಜಿಲ್ಲೆ ಶಾಸಕರು ಸಭೆ ಮಾಡಿ ಈ ಬಗ್ಗೆ ಸಿಎಂಗೆ ಬೇಡಿಕೆ ಇಟ್ಟಿದ್ದೇವೆ ಎಂದರು.

Home add -Advt

ಸಂಪುಟ ವಿಸ್ತರಣೆ, ಸಚಿವ ಸ್ಥಾನ ವಿಚಾರವಾಗಿ ಸಿಎಂ ಯಡಿಯೂರಪ್ಪ ತೀರ್ಮಾನವೇ ಅಂತಿಮ. ಅವರ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ. ಆದರೆ ಜನರಿಂದ ಆಯ್ಕೆಯಾದವರಿಗೆ ಸಜಿವ ಸ್ಥಾನ ನೀಡಬೇಕು ಎಂಬುದು ನನ್ನ ಅಭಿಪ್ರಾಯ ಎಂದರು.

Related Articles

Back to top button