Latest

*ತೀರ್ಥಹಳ್ಳಿಯಲ್ಲಿ NIA ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ ಐ ಎ(ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದಾರೆ.

ಶಂಕಿತ ಉಗ್ರರಾದ ಶಾರಿಕ್ ಹಾಗೂ ಮಾಜ್ ಮುನೀರ್ ನಿವಾಸಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಾರಿಕ್, ಮಾಜ್ ಮುನೀರ್ ಅವರ ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಇಂದು ಬೆಳಿಗ್ಗೆ 5 ಕಾರುಗಳಲ್ಲಿ ಆಗಮಿಸಿರುವ 15ಕ್ಕೂ ಹೆಚ್ಚು ಎನ್ ಐ ಎ ಅಧಿಕಾರಿಗಳು ಎರಡೂ ಮನೆಗಳಲ್ಲಿ ತೀವ್ರ ಶೋಧ ನಡೆಸಿದ್ದಾರೆ.

*ನೇಣುಬಿಗಿದ ಸ್ಥಿತಿಯಲ್ಲಿ ದೇಹದಾರ್ಢ್ಯಪಟು ಶವವಾಗಿ ಪತ್ತೆ*

Home add -Advt

https://pragati.taskdun.com/body-builderdeathbangalore/

Related Articles

Back to top button