Latest

ಬೆಕ್ಕಿಗಾಗಿ ಭರ್ಜರಿ ಬರ್ತ್ ಡೇ ಆಚರಣೆ; ಕೊರೊನಾ ಸೋಂಕಿಗೆ ತುತ್ತಾದ 15 ಜನ

ಪ್ರಗತಿವಾಹಿನಿ ಸುದ್ದಿ; ಚಿಲಿ: ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಸಾಕು ನಾಯಿ, ಬೆಕ್ಕುಗಳಿಗೆ ಸೀಮಂತ, ಹುಟ್ಟುಹಬ್ಬ ಆಚರಿಸಿ ಸಂಭ್ರಮಿಸುವುದು ಸಾಮಾನ್ಯವಾಗಿದೆ. ಹೀಗೆ ಬೆಕ್ಕಿನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿ 15 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಚಿಲಿಯ ಸ್ಯಾಂಟೋ ಡೊಮಿಂಗೊದಲ್ಲಿ ಬೆಕ್ಕಿಗೆ ಬರ್ತ್ ಡೇ ಪಾರ್ಟಿ ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 15 ಜನರಿಗೆ ಇದೀಗ ಕೊರೊನಾ ಸೋಂಕು ಪತ್ತೆಯಾಗಿದೆ. ಹೀಗಾಗಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ನೂರಾರು ಜನರು ಆತಂಕಕ್ಕೀಡಾಗಿದ್ದಾರೆ.

ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Related Articles

Back to top button