
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ದನಗಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.
ಕರುಗಳನ್ನು ಕದ್ದು ಪರಾರಿಯಾಗುತ್ತಿದ್ದ ಮೂರು ಆರೋಪಿಗಳನ್ನು ತಡೆಯಲು ಮುಂದಾದಾಗ ಪೊಲೀಸರ ಮೇಲೆ ವಾಹನ ಹತ್ತಿಸಲು ಯತ್ನಿಸಿದ್ದಾರೆ. ಈ ವೇಳೆ ಪಿಎಸ್ ಐ ರಫಿಕ್ 5 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ.
ಆರೋಪಿಗಳು ಪರಾರಿಯಾಗಿದ್ದು, ಶೋಧಕಾರ್ಯ ಮುಂದುವರೆದಿದೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.