Latest

ಜಾನುವಾರುಗಳ ಸಾಗಾಣಿಕೆ ಹಾಗೂ ಸಂತೆಗಳ ನಿಷೇಧ

ಪ್ರಗತಿವಾಹಿನಿ ಸುದ್ದಿ, ಮೈಸೂರು: ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy Skin Disease) ವ್ಯಾಪಕವಾಗಿ ಹರಡುತ್ತಿರುವ ಈ ಹಿನ್ನಲೆಯಲ್ಲಿ ರೋಗ ಹರಡುವುದನ್ನು ತಡೆಗಟ್ಟಲು ಮೈಸೂರು ಜಿಲ್ಲೆಯಾದ್ಯಂತ ಜಾನುವಾರುಗಳ ಸಾಗಾಣಿಕೆ ಹಾಗೂ ಸಂತೆಗಳನ್ನು ತಾತ್ಕಾಲಿಕವಾಗಿ 2022ರ ಅಕ್ಟೋಬರ್ 11 ರಿಂದ ಡಿಸೆಂಬರ್ 10 ರವರೆಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿಗಳಾದ ಡಾ. ಬಗಾದಿ ಗೌತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ತಿ.ನರಸೀಪುರ, ಸರಗೂರು ಮತ್ತು ಕೆ.ಆರ್.ನಗರ ತಾಲ್ಲೂಕುಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ  (Lumpy Skin Disease) ಕಾಣಿಸಿಕೊಂಡಿದ್ದು ರೋಗ ವ್ಯಾಪಕವಾಗಿ ಹರಡುವ ಸಾಧ್ಯತೆ ಇದೆ. ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ ಎಂದು ಬಗಾದಿ ಗೌತಮ್ ತಿಳಿಸಿದ್ದಾರೆ.

ಕಾಂತಾರ ಸೂಪರ್ ಹಿಟ್ ಆಗಲು 10 ಕಾರಣಗಳು

Home add -Advt

Related Articles

Back to top button