ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿಗಾಗಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.
ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರಿನಲ್ಲಿ ರೈತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳ ಹೋರಾಟ ತೀವ್ರಗೊಂಡಿದೆ. ಇಂದು ಮಂಡ್ಯ, ಮದ್ದೂರು ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಬೆಂಗಳೂರಿನಲ್ಲಿಯೂ ಪ್ರತಿಭಟನೆ ಭುಗಿಲೆದ್ದಿದೆ.
ಈ ನಡುವೆ ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆ.26 ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಮಂಗಳವಾರ ರಾಜ್ಯ ರಾಜಧಾನಿ ಬೆಂಗಳೂರು ಸಂಪೂರ್ಣ ಸ್ತಬ್ಧ ಮಾಡಿ ಗಲ್ಲಿ ಗಲ್ಲಿಗಳಲ್ಲಿಯೂ ಕಾವೇರಿ ನೀರಿಗಾಗಿ ಹೋರಾಟ ನಡೆಸಲು ಕನ್ನಡಪರ ಸಂಘಟನೆಗಳು ಮುಂದಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ