Kannada NewsKarnataka NewsLatest

*ಕಾವೇರಿ ವಿವಾದ; ಸುಪ್ರೀಂ ಕೋರ್ಟ್ ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು.

Related Articles

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ ಎಂಬ ದೂರಿನ ಬಗ್ಗೆ ಉತ್ತರ ನೀಡುತ್ತಾ, ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ಸಚಿವಸಂಪುಟದಲ್ಲಿದ್ದು, ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಾತಿ ಧರ್ಮದವರಿಗೂ ಅನ್ಯಾಯವಾಗುವುದಿಲ್ಲ ಎಂದು ತಿಳಿಸಿದರು.

Home add -Advt

Related Articles

Back to top button