*ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ*
ಇನ್ನೊಂದೆಡೆ ರಾಜ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನದಿ ನೀರು ವಿಚಾರವಾಗಿ ರಾಜ್ಯಕ್ಕೆ ಸುಪ್ರೀಂ ಕೋರ್ತ್ ಶಾಕ್ ನೀಡಿದ್ದು, ಮತ್ತೆ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ.
ತಮಿಳುನಾಡಿಗೆ 15 ದಿನಗಳ ಕಾಲ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ ನಡೆಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಹೊರಡಿಸುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನದೆಸಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಡಿಗೆ ನೀರು ಬಿಡಬಾರದು. ಸುಪ್ರೀಂ ಕೋರ್ಟ್ ಆದೇಶ ರಾಜ್ಯದ ರೈತರಿಗೆ ಮರಣ ಶಾಸನ. ತಕ್ಷಣ ಆದೇಶ ಹಿಂಪಡೆಯುವಂತೆ ಕರವೇ ಆಗ್ರಹಿಸಿದೆ.
ಇನ್ನೊಂದೆಡೆ ಮೈಸೂರಿನಲ್ಲಿ ರೈತ ಸಂಘಟನೆಗಳು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿವೆ. ಸುಪ್ರೀಂ ಕೋರ್ಟ್ ಆದೇಶ ರಾಜ್ಯದ ರೈತರಿಗೆ ಮಾಡಿರುವ ಅನ್ಯಾಯ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಲು ವಿಫಲವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ