Kannada NewsKarnataka NewsNational

*ಕಾವೇರಿ ವಿವಾದ*: *ತಮಿಳುನಾಡಿಗೆ ಬಿಗ್ ಶಾಕ್​​ ಕೊಟ್ಟ ಸುಪ್ರೀಂಕೋರ್ಟ್*​

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ.

ಕರ್ನಾಟಕದಿಂದ ಕಾವೇರಿ ನದಿಯ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರನ್ನೊಳಗೊಂಡ ಪೀಠ ಈ ಬಗ್ಗೆ ಮಹತ್ವದ ಆದೇಶ ನೀಡಿದೆ.

ತಮಗೆ ಬರಬೇಕಾದ ಕಾವೇರಿ ನೀರಿನ ಪಾಲನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಎರಡು ಅರ್ಜಿಗಳನ್ನು ಸಲ್ಲಿಸಿತ್ತು.

ಆಗಸ್ಟ್‌ನಲ್ಲಿ ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದರೂ ಕರ್ನಾಟಕದಿಂದ ತನಗೆ ನಿಗದಿಪಡಿಸಿದ ನೀರಿನ ಪಾಲು ಲಭಿಸಿಲ್ಲ ಎಂದು ತಮಿಳುನಾಡು ಆರೋಪಿಸಿತ್ತು. ಸುಮಾರು 11 ಸಾವಿರ ಮಿಲಿಯನ್ ಕ್ಯೂಬಿಕ್ ಅಡಿ (ಟಿಎಂಸಿ) ನೀರಿನ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು. ಆದರೆ, ತಮಿಳುನಾಡಿನ ಆರೋಪವನ್ನು ಕರ್ನಾಟಕ ಸರ್ಕಾರ ನಿರಾಕರಿಸಿತ್ತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶಗಳನ್ನು ಪಾಲಿಸುತ್ತಿರುವುದಾಗಿ ಸ್ಪಷ್ಟಪಡಿಸಿತ್ತು.

Related Articles

Back to top button