Kannada NewsKarnataka NewsLatest

*ಕರ್ನಾಟಕ-ತಮಿಳುನಾಡು ಮುಖ್ಯಮಂತ್ರಿಗಳ ಸಭೆಗೆ ಡೇಟ್ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಹಾಗೂ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯುವ ಸಭೆಗೆ ಮುಹೂರ್ತ ಫಿಕ್ಸ್ ಆಗಿದೆ.

ಕಾವೇರಿ ನೀರು ವಿವಾದ ವಿಚಾರವಾಗಿ ಕರ್ನಾಟಕ ಸಿಎಂ ಡಿ.ಕೆ ಶಿವಕುಮಾರ್ ಹಾಗೂ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ನಡುವಿನ ಸಂದಾನ ಮಾತುಕತೆಗೆ ವಿಧಾನಸೌಧದಲ್ಲಿ ವೇದಿಕೆ ಸಿದ್ಧವಾಗಿದ್ದು, ಆಗಸ್ಟ್ 3ರಂದು ಮಧ್ಯಾಹ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಿಗದಿಯಾಗಿದೆ.

ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿದ್ಧತೆ ನಡೆಯುತ್ತಿವೆ. ಸಭೆಯಲ್ಲಿ ಎರಡೂ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳು ಸೇರಿ ಒಟ್ಟು 25 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಕರ್ನಾಟಕದಲ್ಲಿ ಭೀಕರ ಬರಗಾಲದ ಸ್ಥಿತಿಯಲ್ಲಿಯೂ CWRC ತಮಿಳುನಾಡಿಗೆ ನೀರು ಹರಿಸಲು ಆದೇಶ ನೀಡಿದ್ದು, ರಾಜ್ಯದಲ್ಲಿ ರೈತರ ಸಹನೆ ಕಟ್ಟೆಯೊಡೆದು ಪ್ರತಿಭಟನೆಗಳು ಪ್ರಾರಂಭವಾಗಿರುವ ಹೊತ್ತಲ್ಲೇ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕುತೂಹಲ ಮೂಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button