Karnataka NewsLatest

*ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿಗರಿಗೆ ಶೀಘ್ರದಲ್ಲಿಯೇ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಕಾವೇರಿ ನೀರಿನ ದರ ಶೀಘ್ರದಲ್ಲಿಯೇ ಹೆಚ್ಚಾಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರವೇ ಸುಳಿವು ನೀಡಿದೆ.

ಬೆಂಗಳೂರಿಗರಿಗೆ ಬೆಲೆ ಏರಿಕಯ ಶಾಕ್ ಮೇಲೆ ಶಾಕ್ ನೀಡಲಾಗುತ್ತಿದ್ದು, ಜನಸಾಮಾನ್ಯರು ಜೀವನ ನಡೆಸುವುದೂ ದುಸ್ಥರವಾಗಿದೆ. ಕುಡಿಯುವ ನೀರೂ ಬಾಯಿ ಸುಡುತ್ತಿದೆ.

ಶೀಘ್ರದಲ್ಲಿಯೇ ಕಾವೇರಿ ನೀರಿನ ದರ ಏರಿಕೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಾವೇರಿ ನೀರಿನದ ದರ ಶೀಘ್ರದಲ್ಲೇ ಹೆಚ್ಚಳವಾಗಲಿದೆ. ಯಾವಾಗಿನಿಂದ ನೀರಿನ ದರ ಏರಿಕೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದಿದ್ದಾರೆ.

Home add -Advt

Related Articles

Back to top button