*ಸಾರಿಗೆ ಇಲಾಖೆ 6 ಅಧಿಕಾರಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಸಿಬಿಐ ಅಧಿಕಾರಿಗಳು ಸಾರಿಗೆ ಇಲಾಖೆಯ 6 ಅಧಿಕಾರಿಗಳನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿ ಸಾರಿಗೆ ಇಲಾಖೆ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಭ್ರಷ್ಟಾಚಾರ, ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು 6 ಅಧಿಕಾರಿಗಳನ್ನು ಬಂಧಿಸಿದ್ದಾರೆ. ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸೋಲಿನ ಬಳಿಕ ನಡೆದ ಮಹತ್ವದ ಬೆಳವಣಿಗೆ ಇದಾಗಿದೆ. *KPCC ಅಧ್ಯಕ್ಷರ ಹುದ್ದೆ ಶೀಘ್ರದಲ್ಲೇ ಬದಲಾವಣೆ? ಸುಳಿವು ನೀಡಿದ್ರಾ AICC ಅಧ್ಯಕ್ಷ ಖರ್ಗೆ?*