
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಬಿಎಸ್ಸಿಯ 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕ ಘೋಷಣೆಯಾಗಿದ್ದು, ಜುಲೈ ಮೊದಲಾರ್ಧದ ಅವಧಿಯಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಸಿಬಿಎಸ್ಸಿಯ 10 ಮತ್ತು 12ನೇ ತರಗತಿ ಪರೀಕ್ಷಾ ದಿನಾಂಕಗಳು ಮುಂದೂಡಿಕೆಯಾಗಿತ್ತು. ಇದೀಗ ಪರೀಕ್ಷೆ ದಿನಾಂಕ ಪ್ರಕಟಗೊಂಡಿದ್ದು, ಜುಲೈ 1ರಿಂದ 15ರವರೆಗೆ ಸಿಬಿಎಸ್ಸಿಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ನಡೆಸಲುತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪರೀಕ್ಷೆಯ ವೇಳಾಪಟ್ಟಿಯನ್ನು ಸವಿವರವಾಗಿ ಸಿಬಿಎಸ್ಸಿ ನಂತರದಲ್ಲಿ ಪ್ರಕಟಿಸಲಿದೆ ಎಂದುಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ