Kannada NewsKarnataka NewsLatest

*ಸಿಸಿಬಿ ಇನ್ಸ್ ಪೆಕ್ಟರ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಅಪರಾಧ ಕೇಂದ್ರ ವಿಭಾಗದ ರೌಡಿ ನಿಗ್ರಹ ದಳದ ಇನ್ಸ್ ಪೆಕ್ಟರ್ ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ರೌಡಿಶೀಟರ್ ಜೊತೆ ಲಿಂಕ್ ಹೊಂದಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ನಟೋರಿಯಸ್ ರೌಡಿಗಳ ಬಗ್ಗೆ ಮಾಹಿತಿ ಕಲೆಹಾಕುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸೂಚಿಸಿದ್ದರು. ಅಲ್ಲದೇ ರೌಡಿಶೀಟರ್ ಕಾಡುಬೀಸನಹಳ್ಳಿ ರೋಹಿತ್ ಚಲನವಲನಗಳ ಬಗ್ಗೆ ವರದಿ ನೀಡುವಂತೆ ಕೇಲಿದ್ದರು. ಆದರೆ ಇನ್ಸ್ ಪೆಕ್ಟರ್ ಜ್ಯೋತಿರ್ಲಿಂಗ ರೌಡಿಶೀಟರ್ ಗಳ ಬಗ್ಗೆ ಯಾವುದೇ ಮಾಹಿತಿ ಕಲೆಹಾಕದೇ ವರದಿ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಸಿಸಿಬಿ ಹಿರಿಯ ಅಧಿಕಾರಿಗಳು ಜ್ಯೋತಿರ್ಲಿಂಗ ವಿರುದ್ಧ ಪೊಲೀಸ್ ಆಯುಕ್ತರಿಗೆ ವರದಿ ನೀಡಿದ್ದರು. ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತರು ಇನ್ಸ್ ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button