Belagavi NewsBelgaum NewsCrimeKannada NewsKarnataka NewsLatestNationalPolitics

*ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಂಗ್ರಾಳಿ ಬಿ.ಕೆ ಗ್ರಾಮದ ಲಕ್ಷ್ಮೀ ಗಲ್ಲಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ  ಗಾಂಜಾ ಮಾರಾಟ ಮಾಡುವಾಗ ಬೆಳಗಾವಿಯ ಸಿಸಿಬಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.‌

ಕಾರ್ತಿಕ ಭರತ ಚಿಕ್ಕಾಲಕರ (29) ಹಾಗೂ ಪ್ರಕಾಶ ಅರ್ಜುನ ಬಂಗಾರಿ (20) ಬಂಧಿತ ಆರೋಪಿಗಳು. ಆರೋಪಿಗಳಿಂದ 1,00,000 ಮೌಲ್ಯದ 1ಕೆ.ಜಿ. 920 ಗ್ರಾಂ. ಗಾಂಜಾ ಹಾಗೈ ರೂ. 700  ಮೌಲ್ಯದ ಒಂದು ಮೋಬೈಲ್ ಹೀಗೆ ಒಟ್ಟು ರೂ. 1,00,700/-ಮೌಲ್ಯದ ವಸ್ತುಗಳನ್ನು ಜಪ್ತಪಡಿಸಿಕೊಂಡು ಆರೋಪಿತರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದು. ಪ್ರಕರಣದ ತನಿಖೆ ಮುಂದುವರೆಸಲಾಗಿದೆ.

Home add -Advt

ಈ ಪ್ರಕರಣದಲ್ಲಿ ಆರೋಪಿತರನ್ನು ವಶಕ್ಕೆ ಪಡೆದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿದ ಪಿಐ, ಪಿಎಸ್‌ಐ, ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

Related Articles

Back to top button