Latest

ಬಾಲಿವುಡ್ ನಲ್ಲಿ ಮತ್ತೆ ಮೀ ಟೂ; ಖ್ಯಾತ ನಿರ್ದೇಶಕನ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಬಾಲಿವುಡ್ ನಲ್ಲಿ ಮತ್ತೊಮ್ಮೆ ಮೀ ಟೂ ಆರೋಪ ಸದ್ದು ಮಾಡುತ್ತಿದೆ. ಖ್ಯಾತ ನಿರ್ದೇಶಕ, ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ನಟಿ ಪಾಯಲ್ ಘೋಷ್ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ.

ಈ ಬಗ್ಗೆ ನಟಿ ಪಾಯಲ್ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಅನುರಾಗ್ ಕಶ್ಯಪ್ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ತನ್ನ ಸಲ್ವಾರ್ ಕಮೀಜ್ ತೆಗೆದು ತನ್ನ ಮೇಲೆ ಲೈಂಗಿಕ ದೌರ್ಜನ್ಯಗಳನ್ನು ಎಸಗಿದ್ದಾರೆ. ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಐದು ವರ್ಷಗಳ ಹಿಂದೆ ನಡೆದ ಘಟನೆಯಲ್ಲಿ ಅನುರಾಗ್‌ ಕಶ್ಯಪ್, ಯಾವ ರೀತಿ ಲೈಂಗಿಕ ದೌರ್ಜನ್ಯವನ್ನು ನಡೆಸಿದ್ದಾರೆ ಎಂಬುದನ್ನು ಪಾಯಲ್ ವಿಡಿಯೋ ಮೂಲಕ ವಿವರಿಸಿದ್ದಾರೆ. ಜೊತೆಗೆ ಒಂದು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿರುವ ಪಾಯಲ್, ಅನುರಾಗ್ ವಿರುದ್ಧ ಕ್ರಮ ಕೈಗೊಳ್ಳಿ. ಒಬ್ಬ ಸೃಜನಶೀಲ ವ್ಯಕ್ತಿಯ ಹಿಂದಿರುವ ರಾಕ್ಷಸ ಮುಖವನ್ನು ದೇಶ ನೋಡಲಿ. ನನಗೆ ಗೊತ್ತಿದೆ, ಇದರಿಂದ ನನಗೆ ತೊಂದರೆ ಆಗಲಿದೆ. ನಾನೀಗ ತೊಂದರೆಯಲ್ಲಿದ್ದೇನೆ. ದಯವಿಟ್ಟು ಸಹಾಯ ಮಾಡಿ ಎಂದು ಕೋರಿದ್ದಾರೆ.

ನಟಿ ಪಾಯಲ್ ಘೋಷ್ ಆರೋಪದ ಬೆನ್ನಲ್ಲೇ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಪ್ರಕರಣದ ಬಗ್ಗೆ ಸಂಪೂರ್ಣ ವಿವರ ಕೇಳಿದ್ದಾರೆ. ನಟಿ ಕಂಗನಾ ರಣಾವತ್ ಕೂಡ ಪಾಯಲ್ ಬೆಂಬಲಕ್ಕೆ ನಿಂತಿದ್ದಾರೆ.

Home add -Advt

ಈ ನಡುವೆ ಪಾಯಲ್ ಆರೋಪಕ್ಕೆ ಅನುರಾಗ್ ಕಶ್ಯಪ್ ಟ್ವೀಟ್‍ ಮೂಲಕ ಪ್ರತಿಕ್ರಿಯಿಸಿದ್ದು, ನನ್ನನ್ನು ಸುಮ್ಮನಿರಿಸುವ ಪ್ರಯತ್ನವನ್ನು ತುಂಬಾ ಸಮಯದ ಬಳಿಕ ಮಾಡುತ್ತಿದ್ದೀರಿ. ಇರಲಿ, ನನ್ನನ್ನು ಮೌನಗೊಳಿಸುವ ಪ್ರಯತ್ನದಲ್ಲಿ ನಿಮ್ಮ ಜೊತೆಗೆ ಹಲವು ಮಹಿಳೆಯರನ್ನು ಎಳೆದು ತಂದಿದ್ದೀರಿ. ಎಲ್ಲಾ ಆರೋಪಗಳು ಆಧಾರರಹಿತವಾಗಿವೆ ಎಂದಿದ್ದಾರೆ.

 

Related Articles

Back to top button