Kannada NewsKarnataka NewsLatest

ಸಿಡಿ ಪ್ರಕರಣ: ರಮೇಶ್ ಕೈ ಬಿಟ್ಟು ಬಾಲಚಂದ್ರ ಜಾರಕಿಹೊಳಿಗೆ ಮಂತ್ರಿಸ್ಥಾನ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸಚಿವ ರಮೇಶ ಜಾರಕಿಹೊಳಿ ರಾಸಲೀಲೆ ಪ್ರಕರಣ ಹೊರಬಂದಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಸರಕಾರ ಮುಜುಗರದಿಂದ ತಪ್ಪಿಸಿಕೊಳ್ಳಲು ಹೊಸ ಪ್ಲ್ಯಾನ್ ರೂಪಿಸುತ್ತಿದೆ.

ಸಚಿವ ರಮೇಶ ಜಾರಕಿಹೊಳಿ ಅವರಿಂದ ರಾಜಿನಾಮೆ ಪಡೆದು ಕೆಎಂಎಫ್ ಅಧ್ಯಕ್ಷ, ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸಚಿವಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಈಗ ಎದುರಾಗಿರುವ ಸಂಕಷ್ಟದಿಂದ ಹೊರಬರುವುದಕ್ಕೆ ಇದೊಂದೇ ದಾರಿ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣರಾಗಿರುವ ರಮೇಶ ಜಾರಕಿಹೊಳಿ ಅವರನ್ನು ಕೈಬಿಟ್ಟರೆ ಬೇರೆ ಸಂದೇಶ ಹೋಗಬಹುದು. ಹಾಗಾಗಿ ಜಾರಕಿಹೊಳಿ ಕುಟುಂಬದಲ್ಲೇ, ಅವರ ಸಹೋದರಗೆ ಸ್ಥಾನ ಕಲ್ಪಿಸಿದರೆ ಸ್ವಲ್ಪಮಟ್ಟಿಗೆ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯ ಎನ್ನುವ ಚಿಂತನೆ ನಡೆದಿದೆ.

ಆದರೆ ಈ ಮಧ್ಯೆ ಮಾತನಾಡಿರುವ ಬಾಲಚಂದ್ರ ಜಾರಕಿಹೊಳಿ, ಯಾವುದೇ ಕಾರಣದಿಂದ ರಮೇಶ ಜಾರಕಿಹೊಳಿ ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಇದೊಂದು ನಕಲಿ ವಿಡೀಯೋ ಎಂದಿದ್ದಾರೆ.

ದೂರು ನೀಡಿರುವವರ ವಿರುದ್ಧವೇ ಪ್ರಕರಣ ದಾಖಲಿಸುತ್ತೇವೆ. 100 ಕೋಟಿ ರೂ. ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಿದ್ದೇವೆ ಎಂದು ಬಾಲಚಂದ್ರ ಹೇಳಿದ್ದಾರೆ.

ಒಟ್ಟಾರೆ ರಾಜ್ಯದಲ್ಲಿ ತೀವ್ರ ರಾಜಕೀಯ ಚಟುವಟಿಕೆಯಂತೂ ನಡೆಯುತ್ತಿದ್ದು, ಸಂಜೆಯ ಹೊತ್ತಿಗೆ ಸ್ಪಷ್ಟ ನಿರ್ಧಾರ ಹೊರಬರಬಹುದು.

ಸಿಡಿ ಪ್ರಕರಣ: 100 ಕೋಟಿ ರೂ. ಮಾನನಷ್ಟ ಮೊಕದ್ದಮೆಗೆ ಚಿಂತನೆ – ಬಾಲಚಂದ್ರ ಜಾರಕಿಹೊಳಿ

BIG NEWS: ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಬಿಡುಗಡೆ; ದೂರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button