Latest

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ಐಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

Home add -Advt

ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸ್ಐಟಿ ಸಿಡಿ ತನಿಖೆಯನ್ನು ನಿಸ್ಪಕ್ಷಪಾತ, ನಿಷ್ಠೂರ, ನ್ಯಾಯಸಮ್ಮತವಾಗಿ ನಡೆಸುತ್ತಿದೆ ಎಂದು ಹೇಳಿದರು.

ಇನ್ನು ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಲಾಗುತ್ತಿದೆ. ಶಾಲಾ ಕಾಲೇಜುಗಳ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತವೆ. ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ. ಬದಲಿಗೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.

ಎರಡು ವಿಧಾನಸಭೆ ಹಾಗೂ ಒಂದು ಲೋಕಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ. ಈ‌ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ದಾಖಲೆ ಮತಗಳಿಂದ ಜಯ ಗಳಿಸಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು.

Related Articles

Back to top button