Kannada NewsLatest

ಸಿಡಿ ಪ್ರಕರಣ: ಬೆಳಗಾವಿಯಲ್ಲಿ ಮೌನ ಮುರಿದ ಸಿಎಂ ಯಡಿಯೂರಪ್ಪ

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೌನವಾಗಿಲ್ಲ. ಪ್ರತಿ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇನೆ

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂಬುದರಲ್ಲಿ ಸತ್ಯಾಂಶವಿಲ್ಲ ನೂರಕ್ಕೆ ನೂರರಷ್ಟು ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಲೋಕಸಭಾ ಉಪಚುನಾವಣೆ ಹಿನ್ನೆಲೆಯಯಲ್ಲಿ ಬೆಳಗಾವಿಗೆ ಆಗಮಿಸಿರುವ ಸಿಎಂ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೌನವಾಗಿಲ್ಲ. ಪ್ರತಿ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇನೆ. ಗೃಹ ಸಚಿವರು ಸಿಡಿ ಪ್ರಕರಣದ ಜವಾಬ್ದಾರಿ ಪಡೆದು ಕೆಲಸ ಮಾಡುತ್ತಿದ್ದಾರೆ ಎಂದರು.

Home add -Advt

ಸುಮ್ಮನೇ ಹೇಳಿಕೆ ನೀಡುವುದರಿಂದ ಯಾವುದೇ ಪ್ರಯೋಜನವಾಗಲ್ಲ. ತನಿಖೆ ಸರಿಯಾಗಿ ಆಗುತ್ತಿಲ್ಲ ಎಂಬುದರಲ್ಲಿ ಸತ್ಯಾಂಶವಿಲ್ಲ. ನೂರಕ್ಕೆ ನೂರರಷ್ಟು ಕಾನೂನು ಚೌಕಟ್ಟಿನಲ್ಲಿ ತನಿಖೆ ಸಮರ್ಪಕವಾಗಿ ನಡೆಯುತ್ತಿದೆ.ಈ ಬಗ್ಗೆ ಯಾವುದೇ ಅನುಮಾನಗಳು ಬೇಡ ಎಂದು ಹೇಳಿದರು.

ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ: ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆಗೆ ಉಪಸ್ಥಿತಿ

Related Articles

Back to top button