Latest

ಇಂದು ನ್ಯಾಯಾಲಯದ ಮುಂದೆ ಹಾಜರಾಗಿಲ್ಲ ಸಿಡಿ ಲೇಡಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡುತ್ತಾಳೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಯುವತಿ ಇಂದು ಕೋರ್ಟ್ ಮುಂದೆ ಹಾಜರಾಗಿಲ್ಲ.

ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿಡಿ ಯುವತಿಯ ಪರ ವಕೀಲ ಜಗದೀಶ್ ಸಲ್ಲಿಸಿರುವ ಅರ್ಜಿ ಚೀಫ್ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಮುಂದಿದೆ. ಯುವತಿ ಹಾಜರು ಪಡಿಸಲು ನ್ಯಾಯಾಲಯ ಇನ್ನೂ ಅನುಮತಿ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯುವತಿ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ನ್ಯಾಯಾಧೀಶರ ಎದುರು ಹೇಳಿಕೆ ದಾಖಲಿಸುವುದು ಅನುಮಾನವಾಗಿದೆ.

Home add -Advt

ಇನ್ನು ಸುದ್ದಿಗಾರರೊಂದಿಗೆ ಮಾತನಾಡಿರುವ ವಕೀಲ ಜಗದೀಶ್, ಆರೋಪಿ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ನಮ್ಮ ಚಲನವಲನಗಳನ್ನು ಗಮನಿಸುತ್ತಿದ್ದಾರೆ. ಹಾಗಾಗಿ ನಾನು ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಕೋರ್ಟ್ ಅನುಮತಿ ನೀಡಿದ ಅರ್ಧಗಂಟೆಯಲ್ಲಿ ಯುವತಿ ಕೋರ್ಟ್ ಮುಂದೆ ಹಾಜರಾಗಲಿದ್ದಾಳೆ. ಕೋರ್ಟ್ ಆದೇಶ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಿಡಿ ಪ್ರಕರಣ: ಎಸ್ಐಟಿ ರದ್ದು ಕೋರಿ ಹೈಕೋರ್ಟ್ ಗೆ ಪಿಐಎಲ್

Related Articles

Back to top button