ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೆ ಸಿಡಿದೆದ್ದಿದ್ದಾಳೆ. ಪ್ರಕರಣದಲ್ಲಿ ಆರೋಪಿಯನ್ನು ರಕ್ಷಿಸಲು ಸರ್ಕಾರ ಹಾಗೂ ಎಸ್ ಐಟಿ ಮುಂದಾಗಿದೆ ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಯುವತಿ ಪತ್ರ ಬರೆದಿದ್ದಾಳೆ.
ಸಿಡಿ ಪ್ರಕರಣದಲ್ಲಿ ಎಸ್ ಐಟಿ ತನಿಖೆ ಬಗ್ಗೆ ನನಗೆ ವಿಶ್ವಾಸವಿಲ್ಲ. ಸರ್ಕಾರ ನೇಮಕ ಮಾಡಿರುವ ವಿಶೆಷ ಅಭಿಯೋಜಕರ ನೇಮಕದ ಬಗ್ಗೆ ನನಗೆ ಆಕ್ಷೇಪವಿದೆ. ನನ್ನ ಸಹಮತವಿಲ್ಲದೇ ವಿಶೇಷ ಅಭಿಯೋಜಕರ ನೇಮಕ ಮಾಡಲಾಗಿದೆ. ಸರ್ಕಾರದ ಒತ್ತಡಕ್ಕೆ ಎಸ್ ಐಟಿ ಅಧಿಕಾರಿಗಳು ಮಣಿಯುತ್ತಿದ್ದಾರೆ. ನಿಸ್ಪಕ್ಷಪಾತವಾಗಿ ಪ್ರಕರಣದ ತನಿಖೆ ನಡೆಸಿ ನನಗೆ ನ್ಯಾಯ ಕೊಡಿಸಿ ಎಂದು ಯುವತಿ ಪತ್ರದಲ್ಲಿ ಮನವಿ ಮಾಡಿದ್ದಾಳೆ.
ಇಡೀ ಪ್ರಕರಣ ನಿಸ್ಪಕ್ಷಪಾತವಾಗಿ ತನಿಖೆ ನಡೆಯುತ್ತಿಲ್ಲ. ಆರೋಪಿಯನ್ನು ರಕ್ಷಿಸಲು ನನ್ನ ವಿರುದ್ಧವೇ ಅಧಿಕಾರಿಗಳು ಷಡ್ಯಂತ್ರ ನಡೆಸುತ್ತಿದ್ದಾರೆ. ಸರ್ಕಾರದ ಒತ್ತಡಕ್ಕೆ ಎಸ್ ಐಟಿ ಮಣಿದಿದೆ. ಆರೋಪಿಯನ್ನು ಮುಕ್ತವಗಿ ಓಡಾಡಲು ಎಸ್ ಐಟಿ ಅವಕಾಶ ನೀಡಿದೆ. ರಮೇಶ್ ಜಾರಕಿಹೊಳಿ ದೂರಿನಲ್ಲಿ ನನ್ನ ಹೆಸರಿಲ್ಲ. ನನ್ನ ಹೆಸರಿಲ್ಲದಿದ್ದರೂ ಪಿಜಿಯಲ್ಲಿ ಪರಿಶೀಲನೆ ನಡೆಸಲಾಗಿದೆ. ರಮೇಶ್ ಜಾರಕಿಹೊಳಿ ನನ್ನ ಚಾರಿತ್ರ್ಯವಧೆ ಮಾಡುವ ಷಡ್ಯಂತ್ರ ನಡೆಸಿದ್ದಾರೆ ಎಂದು ಬರೆದಿದ್ದಾಳೆ.
ಅಲ್ಲದೇ ಸಿಎಂ ಯಡಿಯೂರಪ್ಪ ವಿರುದ್ಧವೂ ಆರೋಪ ಮಾಡಿರುವ ಸಿಡಿ ಯುವತಿ, ಪ್ರಕರಣದಲ್ಲಿ ರಮೇಶ್ ಆರೋಪ ಮುಕ್ತರಾಗಿ ಬರುತ್ತಾರೆ ಎಂದು ಸಿಎಂ ಹೇಳಿಕೆ ನೀಡಿರುವುದು ನನಗೆ ಅಚ್ಚರಿ ತಂದಿದೆ. ನನಗಾಗಿರುವ ಅನ್ಯಾಯದ ಬಗ್ಗೆ ಸ್ವತ: ನಾನು ದೂರು ನೀಡಿದ್ದರೂ ಆರೋಪಿಯನ್ನು ಕೇವಲ 3 ಗಂಟೆ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ. ಸಿಎಂ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗಿ ಬರುತ್ತಾರೆ. ಇದು ಅವರ ವಿರುದ್ಧ ನಡೆದ ವ್ಯವಸ್ಥಿತ ಷಡ್ಯಂತ್ರ ಎಂದು ಹೇಳುತ್ತಿದ್ದಾರೆ. ಈ ಪ್ರಕರಣದ ತನಿಖೆ ಮೇಲೆಯೇ ನನಗೆ ನಂಬಿಕೆ ಬರುತ್ತಿಲ್ಲ. ಪ್ರಕರಣದಲ್ಲಿ ನ್ಯಾಯಸಮ್ಮತ ವಿಚಾರಣೆ ನಡೆಸಬೇಕು. ಸರ್ಕಾರದ ಒತ್ತಡಕ್ಕೆ ಮಣಿಯದೇ ನನಗೆ ನ್ಯಾಯ ಕೊಡಿಸಬೇಕು ಎಂದು ಪೊಲಿಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಯುವತಿ ಉಲ್ಲೇಖಿಸಿದ್ದಾಳೆ.
ಅವಶ್ಯಕತೆ ಇದ್ದರೆ ರಮೇಶ್ ಜಾರಕಿಹೊಳಿ ಬಂಧನವಾಗುತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ