Latest

ರಮೇಶ್ ಜಾರಕಿಹೊಳಿಗೆ ಕೊರೊನಾ; ವೈದ್ಯರು ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗೋಕಾಕ್ ತಾಲೂಕು ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ರವೀಂದ್ರ, ಜಾರಕಿಹೊಳಿಯವರಿಗೆ ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ. ಅನಾರೋಗ್ಯದಿಂದ ನಿನ್ನೆ ಸಂಜೆ ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

Home add -Advt

ರಮೇಶ್ ಜಾರಕಿಹೊಳಿ ಆಸ್ಪತ್ರೆಗೆ ಬಂದಾಗ ಅವರಲ್ಲಿ ಉಸಿರಾಟದ ತೊಂದರೆಯಿತ್ತು.ಅಲ್ಲದೆ ಬಿಪಿ, ಶುಗರ್ ಕೂಡ ಅಧಿಕವಾಗಿತ್ತು. ಹಾಗಾಗಿ ಅವರನ್ನು ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು

Related Articles

Back to top button