ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಪ್ರಕರಣದ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅನಾರೋಗ್ಯದ ಕಾರಣ ಹೇಳಿ ತಪ್ಪಿಸಿಕೊಳ್ಳುತ್ತಿದ್ದು, ಇದೀಗ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿರುವ ಕಾಂಗ್ರೆಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್, ಇವತ್ತು ಕೊರೊನಾ ಇದೆ ಎಂದು ಹೇಳುತ್ತಿದ್ದಾರೆ. ನಾಳೆ ….!!!.. ಎಂದು ಟಾಂಗ್ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಇಂದು ಕೊರೊನಾ ಇದೆ ಎನ್ನುತ್ತಿದ್ದಾರೆ. ನಾಳೆ ಬೇರೆ ಇನ್ನೇನು ಅನಾರೋಗ್ಯದ ಬಗ್ಗೆ ವಿವರಣೆ ಕೊಡುತ್ತಾರೋ… ಎಂದು ಟೀಕಿಸಿದ್ದಾರೆ.
ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ