ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ರದ್ದು ಕೋರಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿರುವ ಹೈಕೋರ್ಟ್ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ.
ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ದೂರು ಆಧರಿಸಿ ದಾಖಲಿಸಿರುವ ಎಫ್ ಐ ಆರ್ ಹಾಗೂ ಎಸ್ ಐಟಿ ತನಿಖೆ ರದ್ದುಗೊಳಿಸುವಂತೆ ಯುವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದೆ.
ಪ್ರಕರಣ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿ ಹಾಗೂ ಪ್ರತಿವಾದಿಯಾಗಿರುವುದರಿಂದ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ಯುವತಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಮನವಿ ಪರಿಗಣಿಸಿದ ನ್ಯಾ.ಶ್ರೀನಿವಾಸ್ ಹರೀಶ್ ಕುಮಾರ್ ಏಕಸದಸ್ಯಪೀಠ ವಿಶೇಷ ಪೀಠಕ್ಕೆ ಪ್ರಕರಣವರ್ಗಾವಣೆ ಮಾಡಿದೆ.
ಬಿಜೆಪಿಯಲ್ಲಿ ಬ್ಲ್ಯಾಕ್ ಮೇಲ್ ರಾಜಕಾರಣ; ರಮೇಶ್ ಜಾರಕಿಹೊಳಿಯನ್ನು ಬಂದಿಸಿಲ್ಲವೇಕೆ? ಡಿಕೆಶಿ ಪ್ರಶ್ನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ