ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್ ಗೆ ಸಂಬಂಧಿಸಿದಂತೆ ಸಂತ್ರಸ್ತೆ ಎಸ್ಐಟಿ ರಚನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
ಸಂತ್ರಸ್ತ ಯುವತಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಎಸ್ ಐಟಿ ರಚನೆ, ತನಿಖೆಯ ವಿಧಾನ ಹಾಗೂ ಎಸ್ ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ನಡೆದ ತನಿಖೆ ಕುರಿತಾಗಿ ಯುವತಿ ಪ್ರಶ್ನಿಸಿದ್ದಾಳೆ.
ಎಸ್ ಐ ಟಿ ರಚನೆಯೇ ಸಮರ್ಪಕವಾಗಿ ಇಲ್ಲದಿರುವಾಗ ಸರ್ಕಾರ ಸ್ವಯಂ ಪ್ರೇರಿತವಾಗಿ ಎಸ್ ಐಟಿ ರಚಿಸಿ, ಅದರ ವರದಿಯನ್ನು ಕೋರ್ಟ್ ಗೆ ಸಲ್ಲಿಕೆ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾಳೆ. ವರದಿ ಮೇಲೆ ನನಗೆ ನಂಬಿಕೆ ಇಲ್ಲ. ಎಸ್ ಐಟಿ ವರದಿ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾಳೆ.
ಸಿಡಿ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ.
ಮದುವೆ ಆರತಕ್ಷತೆ ದಿನ ಕುಸಿದು ಬಿದ್ದ ವಧು; ಬ್ರೇನ್ ಡೆಡ್ ಎಂದು ಘೋಷಿಸಿದ ನಿಮ್ಹಾನ್ಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ