Latest

ಸಂಪುಟ ವಿಸ್ತರಣೆ: ಸ್ಪಷ್ಟ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಎರಡು ದಿನಗಳ ದೆಹಲಿ ಪ್ರವಾಸದ ಬಳಿಕ ರಾಜ್ಯಕ್ಕೆ ಆಗಮಿಸುತ್ತಿರುವ ಸಿಎಂ ಬೊಮ್ಮಾಯಿ, ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕೇಂದ್ರ ಸಚಿವರು ಹಾಗೂ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ದೆಹಲಿ ಪ್ರವಾಸ ಫಲಪ್ರದವಾಗಿದೆ ಎಂದರು.
ಮಾತುಕತೆಯೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಾರೆ.

Home add -Advt

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಜತೆ ಚರ್ಚೆ ನಡೆಸಲಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಅವರ ಭೇಟಿ ಸಾಧ್ಯವಾಗಿಲ್ಲ. ಬಿ.ಎಲ್.ಸಂತೋಷ್ ಅವರೊಂದಿಗೂ ಚರ್ಚೆ ನಡೆಸಬೇಕಿದೆ. ಆ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ ಗೊತ್ತೆ?

Related Articles

Back to top button