*ವಿವಿಧ ಜಯಂತಿಗಳ ಆಚರಣೆ: ಪೂರ್ವಭಾವಿ ಸಭೆ ನಡೆಸಿದ ಎಡಿಸಿ ವಿಜಯಕುಮಾರ*
ಪ್ರಗತಿವಾಹಿನಿ ಸುದ್ದಿ: ಸರಕಾರದ ಮಾರ್ಗಸೂಚಿಗಳನ್ವಯ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಗಳು ಕುಮಾರ ಗಂಧರ್ವ ಕಲಾಮಂದಿರದಲ್ಲಿ ಜರುಗಲಿವೆ ಎಂದು ಬೆಳಗಾವಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ (ಜೂ.24) ರಂದು ಜರುಗಿದ ನಾಡಪ್ರಭು ಕೆಂಪೆಗೌಡ ಹಾಗೂ ಡಾ.ಫ.ಗು.ಹಳಕಟ್ಟಿಯವರ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಜೂನ್ 27 ರಂದು ನಾಡಪ್ರಭು ಕೆಂಪೆಗೌಡ ಜಯಂತಿ ಹಾಗೂ ಜುಲೈ 2 ರಂದು ಡಾ.ಫ.ಗು.ಹಳಕಟ್ಟಿ ಅವರ ಜಯಂತಿಗಳನ್ನು ಸರ್ಕಾರದ ಮಾರ್ಗಸೂಚಿಗಳನ್ವಯ ಆಚರಿಸಲಾಗುವದು. ಜಯಂತಿಗಳ ಕಾರ್ಯಕ್ರಮದ ವೇದಿಕೆ, ಆಮಂತ್ರಣ ಪತ್ರಿಕೆ ಮುದ್ರಣ, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕಾರ್ಯಕ್ರಮದ ಕುರಿತಂತೆ ಶಿಷ್ಟಾಚಾರದನ್ವಯ ಚುನಾಯಿತ ಜನಪತ್ರಿನಿಧಿಗಳನ್ನು ಸಾಕಷ್ಟು ಮುಂಚಿತವಾಗಿ ಆಹ್ವಾನಿಸಬೇಕು. ಯಾವುದೇ ಕಾರಣಕ್ಕೂ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಲು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮಾತನಾಡಿ ಜಯಂತಿಗಳ ಆಚರಣೆಯ ರೂಪುರೇಷೆಗಳ ಕುರಿತು ವಿವರಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಸಮಾಜದ ಮುಖಂಡರುಗಳಾದ ಬಸವರಾಜ ರೊಟ್ಟಿ, ಪ್ರವೀಣ ಚಿಕಲಿ, ರಾಜಕುಮಾರ ಭೋಜ, ಸಿ.ಎಂ.ಬೂದಿಹಾಳ ಸೇರಿದಂತೆ ಸಮಾಜದ ಗಣ್ಯರು ಉಪಸ್ಥಿತಿರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ