
ಪ್ರಗತಿವಾಹಿನಿ ಸುದ್ದಿ: ಸಿಮೆಂಟ್ ಕಂಪನಿಯಲ್ಲಿ ಹೈಡ್ರಾ ಬಡಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿ ನಡೆದಿದೆ.
ರವಿ ಪುರು ರಾಠೋಡ್ (45) ಮೃತ ದುರ್ದೈವಿ. ಮೃತ ರವಿ ಕಂಪನಿಯಲ್ಲಿ ಹೈಡ್ರಾ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಹೈಡ್ರಾ ಬಡಿದು ಗಂಭೀರವಾಗಿ ಗಾಯಗೊಂಡಿದ್ದ ರವಿ ಕೊನೆಯುಸಿರೆಳೆದಿದ್ದಾರೆ.
ಕಂಪನಿಯಲ್ಲಿ ಕಾರ್ಮಿಕರಿಗೆ ಸುರಕ್ಷತೆ ಇಲ್ಲ ಎಂದು ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ