Kannada NewsKarnataka NewsPolitics

*ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವಿ.ಎನ್ ರೆಡ್ಡಿ ನಿಧನ*

ಪ್ರಗತಿವಾಹಿನಿ ಸುದ್ದಿ: ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವಿ.ಎನ್ .ರೆಡ್ಡಿ ಅವರು ವಯೋ ಸಹಜ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೆಂಕಟಾಪುರ ಗ್ರಾಮದ ವಿ.ಎನ್ .ರೆಡ್ಡಿ (103) ಅವರು ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ರಾಜ್ಯದ ನಾನಾ ಕಡೆ ಚಳುವಳಿಗಳಲ್ಲಿ ಭಾಗವಹಿಸಿದ್ದರು.

ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗಿಯಾಗಿದ್ದ ಅವರು ಬ್ರಿಟಿಷರವಿರುದ್ಧ ಹೋರಾಡಿ ಅನೇಕ ಬಾರಿ ಸೆರೆವಾಸ ಅನುಭವಿಸಿದ್ದರು. ಅಲ್ಲದೆ ವಿದುರಾಶ್ವತ್ಥದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿ ಕಲ್ಲೂರು ಸುಬ್ಬಾರಾವ್, ತರಿಮೆಲ ನಾಗಿರೆಡ್ಡಿ, ಎ.ಎಮ್.ಲಿಂಗಣ್ಣ ಪಪ್ಪರು ರಾಮಾಚಾರಿ ಜತೆ ಭಾಗವಹಿಸಿದ್ದರು.

ನಾಳೆ ತುಮಕೂರಿನ ವೆಂಕಟಾಪುರದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Home add -Advt

Related Articles

Back to top button