Kannada NewsKarnataka NewsLatest
ಶತಮಾನದ ಜಾತ್ರೆ: ನೀರು, ರಸ್ತೆ ವ್ಯವಸ್ಥೆ ಮಾಡಿ ದೇವಿಯ ದರ್ಶನ ಪಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನೂರು ವರ್ಷಗಳ ನಂತರ ನಡೆಯುತ್ತಿರುವ ಹಿಂಡಲಗಾ ಗ್ರಾಮದ ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ದೇವಿಯ ಸನ್ನಿಧಿಗೆ ತೆರಳಿ ಕೃಪಾಶೀರ್ವಾದವನ್ನು ಪಡೆದರು.


ಕುಡಿಯುವ ನೀರಿನ ವ್ಯವಸ್ಥೆ


ಹಿಂಡಲಗಾ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವ ಜರುಗುತ್ತಿರುವ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತಾಧಿಗಳಿಗೆ ನೀರಿನ ತೊಂದರೆಗಳಾಗಬಾರದೆನ್ನುವ ಉದ್ದೇಶದಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಟ್ಯಾಂಕರ್ ಗಳ ಮೂಲಕ ನೀರನ್ನು ಸರಬರಾಜು ಮಾಡಲು ವ್ಯವಸ್ಥೆ ಮಾಡಿದ್ದಾರೆ.
ಹಿಂಡಲಗಾ ಗಣೇಶ ಮಂದಿರದಿಂದ ಬಾಕ್ಷೈಟ್ ರಸ್ತೆಯ ಮುಕ್ತಾಯದವರೆಗೆ ರಸ್ತೆಯ ಅಭಿವೃದ್ಧಿ, ಸೈಕಲ್ ಟ್ರ್ಯಾಕ್ ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಪ್ರಗತಿಯಲ್ಲಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಪರಿಶೀಲಿಸಿದರು.
ಕಾಮಕಾರಿಗಳ ಗುಣಮಟ್ಟ ಕುರಿತು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ ಲಕ್ಷ್ಮಿ ಹೆಬ್ಬಾಳಕರ್, ಗುಣಮಟ್ಟ ಮತ್ತು ಸಮಯಮಿತಿಯನ್ನು ಕಾಯ್ದುಕೊಳ್ಳುವಂತೆ ಸೂಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ