Belagavi NewsBelgaum NewsKarnataka News
*ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮಹಾತ್ಮಗಾಂಧಿ ಲೋಗೋ ಅನಾವರಣ ಗೊಳಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ” ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಅನಾವರಣ ಗೊಳಿಸಿದರು.
ಬಳಿಕ ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದ, ಸಭಾಧ್ಯಕ್ಷರ ಕೊಠಡಿಯಲ್ಲಿ ಅನುಭವ ಮಂಟಪ ತೈಲ ಕಲಾಕೃತಿಯ ಕಲಾವಿದರನ್ನು ಸನ್ಮಾನಿಸಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗಾಂಧಿ ಭಾರತ ಲಾಂಚನವನ್ನು ಸೋಮವಾರ ಅನಾವರಣ ಮಾಡಿದ ಕ್ಷಣಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಎಚ್ ಕೆ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಮತ್ತಿತರರು ಸಾಕ್ಷಿಯಾದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ