Kannada NewsKarnataka NewsLatest

*ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮತ್ತೊಂದು ದೂರು*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಹಿನ್ನೆಲೆಯಲ್ಲಿ ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.

ಕಲಬುರ್ಗಿ ಜಿಲ್ಲಾ ಘಟಕದ ಕಾಂಗ್ರೆಸ್ ಅಧ್ಯಕ್ಷ ಜಗದೇವ್ ಗುತ್ತೇದಾರ್ ಎಂಬುವವರು ಕಲಬುರ್ಗಿ ಪೊಲೀಸ್ ಆಯುಕ್ತ ಆರ್,ಚೇತನ್ ಅವರಿಗೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ನೀಡಿದ್ದಾರೆ.

Home add -Advt

ಮಲ್ಲಿಕಾರ್ಜುನ ಖರ್ಗೆ ಅವರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ರಾಯಚೂರಿನ ಶಿರವಾಡದಲ್ಲಿ ನಡೆದ ನಮೋ ಭಾರತ ಎಂಬ ಕಾರ್ಯಕ್ರಮದಲ್ಲಿ ಖರ್ಗೆ ಕುಟುಂಬದ ವಿರುದ್ಧ ತೀವ್ರವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.


Related Articles

Back to top button