ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೇಂದ್ರದ ಬಜೆಟ್ ದೇಶದ ಅಭಿವೃದ್ಧಿಯಲ್ಲಿ ಒಂದು ಮೈಲುಗಲ್ಲಾಗಿದೆ. ಮಧ್ಯಮವರ್ಗದವರನ್ನು ಬಡವರನ್ನು ಕೇಂದ್ರವಾಗಿಟ್ಟುಕೊಂಡು ರೂಪಿಸಲಾಗಿದೆ. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಕೃಷಿ ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ನೀಡಿ, ಸಮತೋಲನವನ್ನು ಕಾಯ್ದುಕೊಳ್ಳಲಾಗಿದೆ. ಮಧ್ಯಮವರ್ಗದವರಿಗೆ ತೆರಿಗೆ ಮಿತಿಯನ್ನು 12 ಲಕ್ಷವರೆಗೆ ವಿಸ್ತರಿಸಿದೆ. ಎಲೆಕ್ಟ್ರಿಕಲ್ ವಾಹನಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ರೈತರಿಂದ ಎಲ್ಲ ವರ್ಗದ ಉದ್ಯೋಗಿಗಳವರೆಗೆ ಮೋದಿಜಿಯವರ ಸರ್ಕಾರ ಉತ್ತಮವಾದ ಗಿಫ್ಟ ನೀಡಿದೆ. ಮುಂಬರುವ ದಿನಗಳಲ್ಲಿ ದೇಶಕ್ಕೆ ಈ ಬಜೆಟ್ ಶಕ್ತಿವರ್ಧಕವಾಗುವುದರಲ್ಲಿ ಸಂದೇಹವಿಲ್ಲ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ