ಪ್ರಗತಿವಾಹಿನಿ ಸುದ್ದಿ, ಮೈಸೂರು
ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್. ರಂಗನಾಥ್ ಅವರ ತಾಯಿ ಲೀಲಾ ರಾಮಕೃಷ್ಣಯ್ಯ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾ ರಾಮಕೃಷ್ಣಯ್ಯ, ಇಂದು ಮಧ್ಯಾಹ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಲೀಲಾ ರಾಮಕೃಷ್ಣಯ್ಯ ಅವರಿಗೆ ಎಚ್.ಆರ್. ರಂಗನಾಥ್ ಸೇರಿದಂತೆ ಮೂರು ಜನ ಗಂಡು ಮಕ್ಕಳು ಮತ್ತು ಐದು ಜನ ಹೆಣ್ಣು ಮಕ್ಕಳು ಇದ್ದಾರೆ. ಮಾ17ರ ನಾಳೆ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.