ರಾಜ್ಯ ಸರಕಾರ ಕೋರ್ಟ್ ಮೆಟ್ಟಿಲೇರಿದ ಮೇಲೆ ಸಿಕ್ತು ನ್ಯಾಯ
ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಕೊನೆಗೂ ಕೇಂದ್ರ ಸರ್ಕಾರ ಬರ ಪರಿಹಾರವನ್ನು ಘೋಷಣೆ ಮಾಡಿದೆ. ಹಲವು ಹೋರಾಟಗಳ ಬಳಿಕ, ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಘೋಷಿಸಿದೆ.
ರಾಜ್ಯದಲ್ಲಿನ ಭೀಕರ ಬರ, ಕುಡಿಯುವ ನೀರಿಗೆ ಹಾಹಾಕಾರ, ರೈತರು, ಜನರು, ಜಾನುವಾರುಗಳಿಗೂ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್ ನಲ್ಲಿಯೇ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. 18,174 ಕೋಟಿ ಬರ ಪರಿಹಾರಕ್ಕಾಗಿ ಬೇಡಿಕೆ ಇಟ್ಟಿತ್ತು.
ಆದರೆ ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ವಿಳಂಬ ಮಾಡಿತ್ತು. ಇದರಿಂದ ರಾಜ್ಯ ಸರ್ಕಾರ ಬೇರೆ ದಾರಿ ಕಾಣದೇ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಸರ್ಕಾರ ಸೋಮವಾರದೊಳಗಾಗಿ ಬರ ಪರಿಹಾರ ನಿಡುವುದಾಗಿ ತಿಳಿಸಿತ್ತು. ಇದೀಗ ಕರ್ನಾಟಕಕ್ಕೆ 3,454 ಕೋಟಿ ರೂ ಬರ ಪರಿಹಾರವನ್ನು ಘೋಷಣೆ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ