Karnataka NewsPolitics

*ಪ್ರವಾಸಿಗರ ಮೇಲೆ ದಾಳಿ ಮಾಡಿದ್ದು ಯಾರೆಂದು ಕೇಂದ್ರ ಸರ್ಕಾರ ಪತ್ತೆ ಹಚ್ಚಬೇಕು: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ : ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿರುವ ದಾಳಿಯಲ್ಲಿ ಕೆಲ ಕನ್ನಡಿಗರು ಬಲಿಯಾಗಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. 

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದುಗಳನ್ನೇ ಟಾರ್ಗೆಟ್ ಮಾಡಿ ಈ ಹತ್ಯೆ ಮಾಡಲಾಗಿದೆ. ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರ ನಡೆಸುತ್ತಿರಲಿ, ಈ ಸಂದರ್ಭದಲ್ಲಿ ತಮ್ಮ ಸರ್ಕಾರ ಅದರ ಜೊತೆ ನಿಲ್ಲುತ್ತದೆ, ರಾಜ್ಯದ ಎಲ್ಲಾ ಪಕ್ಷದ ನಾಯಕರು ಇದಕ್ಕೆ ಬೆಂಬಲ ನೀಡುತ್ತಾರೆ ಎಂದು ಹೇಳಿದರು.

ಹಿಂದೂಗಳನ್ನೇ ಗುರಿಯಾಗಿಸಿ ದಾಳಿ ನಡೆಸಿದ ಉಗ್ರರು ಯಾರು, ಎಲ್ಲಿಂದ ಬಂದಿದ್ದರು ಮತ್ತು ಅವರ ಉದ್ದೇಶ ಏನಾಗಿತ್ತು ಅನ್ನೋದನ್ನು ಕೇಂದ್ರ ಸರ್ಕಾರ ಪತ್ತೆ ಮಾಡುತ್ತದೆ, ಕ್ರಮ ತೆಗೆದುಕೊಳ್ಳುತ್ತದೆ. ಕೇಂದ್ರದ ಜೊತೆ ಸದಾ ನಾವು ಇರುತ್ತೇವೆ ಎಂದರು.

ಕೆಲವರು ಈ ದಾಳಿಗೆ ಕೇಂದ್ರ ಸರ್ಕಾರನೇ ಕಾರಣ ಎಂದು ಹೇಳುತ್ತಿದ್ದಾರೆ. ಅದೆಲ್ಲ ಅವರ ವೈಯಕ್ತಿಕ, ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎರಡೂರು ದಿನಗಳಲ್ಲಿ ವರದಿ ಬರಬಹುದು. ಆಗ ದಾಳಿಯ ಹಿಂದೆ ಯಾರಿದ್ದಾರೆ ಅಂತ ಗೊತ್ತಾಗುತ್ತದೆ, ಹಾಗಂತ ಕೇಂದ್ರದ ಕಡೆ ಬೊಟ್ಟು ಮಾಡಿ ಮಾತನಾಡುವುದು  ಸರಿಯಲ್ಲ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button