Kannada NewsKarnataka NewsLatest

*BREAKING: ಡೆತ್ ನೋಟ್ ಬರೆದಿಟ್ಟು ಸೆಂಟ್ರಲ್ ಇಂಟಲಿಜನ್ಸ್ ಸಿಬ್ಬಂದಿ ಆತ್ಮಹತ್ಯೆ!*

ಪ್ರಗತಿವಾಹಿನಿ ಸುದ್ದಿ: ಸೆಂಟ್ರಲ್ ಇಂಟ್ರಲ್ ಇಂಟಲಿಜೆನ್ಸ್ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಚಿಕ್ಕನಹಳ್ಳಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧು (28) ಆತ್ಮಹತ್ಯೆಗೆ ಶರಣಾಗಿರುವ ಸೆಂಟ್ರಲ್ ಇಂಟಲಿಜನ್ಸ್ ಸಿಬ್ಬಂದಿ.

ಸಾವಿಗೂ ಮುನ್ನ ಮಧು ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ. ನನ್ನ ಸಾವಿಗೆ ಅನಾರೋಗ್ಯವೇ ಕಾರಣ ಎಂದು ಬರೆದಿಟ್ಟಿದ್ದಾರೆ. ಐಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಧು ಇತ್ತೀಚೆಗಷ್ಟೇ ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ವರ್ಗಾವಣೆಗೊಂಡಿದ್ದರು ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button