ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಇಂದು ಘೋಷಿಸಲಾಗಿದ್ದು ಕನ್ನಡದ ಹಿರಿಯ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ.
ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ ಸೀತಾ: ರಾಮಾಯಣದ ಸಚಿತ್ರ ಮರುಕಥನ ಕೃತಿ ಆಯ್ಕೆಯಾಗಿದೆ.
ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂ. ಹಾಗೂ ಸನ್ಮಾನ ಒಳಗೊಂಡಿದ್ದರೆ ಅನುವಾದ ಪ್ರಶಸ್ತಿ 50 ಸಾವಿರ ರೂ. ಹಾಗೂ ಸನ್ಮಾನ ಒಳಗೊಂಡಿದೆ.
ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗದ ಲಡಾಯಿ ಪ್ರಕಾಶನ ಪ್ರಕಟಿಸಿದೆ. ಪದ್ಮರಾಜ ದಂಡಾವತಿ ಅವರು ದೇವದತ್ತ ಪಟ್ಟನಾಯಕ ಅವರ ಸೀತಾ ಕೃತಿಯನ್ನು ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಿಸಿದ್ದು ಧಾರವಾಡದ ಮನೋಹರ ಗ್ರಂಥಮಾಲೆಯು ಈ ಕೃತಿ ಪ್ರಕಟಿಸಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕರಾಗಿರುವ ಡಾ.ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ಈ ಪ್ರಶಸ್ತಿ ಆಯ್ಕೆ ನಡೆಯಿತು.
ಅನುವಾದ ಆಯ್ಕೆ ಸಮಿತಿಯ ಜ್ಯೂರಿಗಳಾಗಿ ಜಗದೀಶ್ ಕೊಪ್ಪ, ಕಮಲಾಕರ ಭಟ್ಟ ಹಾಗೂ ಮೋಹನ್ ಕುಂಟಾರ ಕೆಲಸ ನಿರ್ವಹಿಸಿದ್ದರೆ ಮುಖ್ಯ ಪ್ರಶಸ್ತಿ ಆಯ್ಕೆ ಸಮಿತಿಗೆ ಡಾ. ಸಿ. ನಾಗಣ್ಣ, ಪದ್ಮರಾಜ ದಂಡಾವತಿ ಹಾಗೂ ಚಂದ್ರಶೇಖರ ವಸ್ತ್ರದ ಅವರು ಜ್ಯೂರಿಗಳಾಗಿದ್ದರು.
ಪ್ರಶಸ್ತಿಗಳನ್ನು 2023ರ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ವಿಜೇತರರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.
*ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಧ್ಯಂತರ ವರದಿ ಸಲ್ಲಿಕೆ*
https://pragati.taskdun.com/submission-interim-reportkarnataka-state-backward-classes-commission/
*ಸುವರ್ಣ ವಿಧಾನಸೌಧದ ಸುತ್ತ ಬಿಗಿ ಭದ್ರತೆ; 1000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ*
https://pragati.taskdun.com/panchamasali2a-reservation1000-policesecurity/
*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಿನ್ಸಿಪಾಲ್ ಬಂಧನ*
https://pragati.taskdun.com/sexual-harassmentprincipalarresthassanpocso-case/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ