ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ- ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಬರುವ ಶೈಕ್ಷಣಿಕ ವರ್ಷದಿಂದ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸದಲಗಾ ಪಟ್ಟಣದಲ್ಲಿ ನೂತನ ಕೇಂದ್ರೀಯ ಮಹಾವಿದ್ಯಾಲಯ ಆರಂಭವಾಗಲಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಕೇಂದ್ರೀಯ ಮಹಾವಿದ್ಯಾಲಯ ಮಂಜೂರು ಮಾಡುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಹಾಗೂ ಪ್ರಕಾಶ ಜಾವಡೇಕರ ಅವರಿಗೆ ಮನವಿ ಮಾಡಲಾಗಿತ್ತು.
ತಮ್ಮ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಬರುವ ಶೈಕ್ಷಣಿಕ ವರ್ಷದಿಂದ ಸದಲಗಾದಲ್ಲಿ ೧ ರಿಂದ ೫ನೆಯ ತರಗತಿಯವರಿಗೆ ಕೇಂದ್ರಿಯ ವಿದ್ಯಾಲಯ ಆರಂಭಿಸಲಾಗುತ್ತದ್ದು ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಮತ್ತು ಬಡ ಕೂಲಿಕಾರ್ಮಿಕರ ಮಕ್ಕಳ ಶೈಕ್ಷಣಿಕವಾಗಿ ಅನುಕೂಲವಾಗಲಿದೆ.
ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿ ವರ್ಗದ ಮಕ್ಕಳಿಗೆ ಕೇಂದ್ರಿಯ ವಿದ್ಯಾಲಯ ಅನುಕೂಲವಾಗಲಿದ್ದು ಸಾರ್ವಜನಿಕರು ಈ ಕೇಂದ್ರಿಯ ವಿದ್ಯಾಲಯದ ಲಾಭ ಪಡೆದುಕೊಳ್ಳಬೇಕೆಂದು ಅಣ್ಣಾಸಾಹೇಬ ಜೊಲ್ಲೆ ಕೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ