Kannada NewsKarnataka NewsLatest
ಜಿಲ್ಲೆಯ ವಿವಿಧೆಡೆ ಪ್ರವಾಹ ನಷ್ಟದ ಕುರಿತು ಮಾಹಿತಿ ಪಡೆಯುತ್ತಿರುವ ಕೇಂದ್ರ ಅಧ್ಯಯನ ತಂಡ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಅಧ್ಯಯನ ತಂಡ ಹುಕ್ಕೇರಿ ಮತ್ತು ಗೋಕಾಕ ತಾಲೂಕಿನ ವಿವಿಧೆಡೆ ಪರಿಶೀಲನೆ ನಡೆಸಿತು.
ಬೆಳಿಗ್ಗೆ ಬೆಳಗಾವಿಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಜಿಲ್ಲೆಯ ಸ್ಥಿತಿಗತಿ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಮಾಹಿತಿಯನ್ನು ನೀಡಿದರು. ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಮತ್ತಿತರರು ಉಪಸ್ಥಿತರಿದ್ದರು.
ನಂತರ ಇಲ್ಲಿಂದ ತೆರಳಿದ ತಂಡ ವಿವಿಧೆಡೆ ಪರಿಸ್ಥಿತಿಯ ಅವಲೋಕನ ನಡೆಸುತ್ತಿದೆ. ರೈತರು ಕೂಡ ತಮಗೆ ಪ್ರವಾಹದಿಂದಾಗಿರುವ ನಷ್ಟದ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮಾಜಿ ಸಚಿವ ಶಶಿಕಾಂತ ನಾಯಿಕ ಹುಕ್ಕೇರಿ ತಾಲೂಕಿನಲ್ಲಿ ತಂಡಕ್ಕೆ ಪರಿಸ್ಥಿತಿಯನ್ನು ವಿವರಿಸಿದರು.
ಕೇಂದ್ರ ತಂಡಕ್ಕೆ ಪ್ರವಾಹ ಸಂಕಷ್ಟ ದರ್ಶನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ