
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ ಆಗಮಿಸಲಿದೆ.
ಅಕ್ಟೋಬರ್ 3ರಿಂದ 6ರವರೆಗೆ ಕೇಂದ್ರ ತಂಡವು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ, ಬರದಿಂದ ಉಂಟಾಗಿರುವ ಹಾನಿಯ ಕುರಿತು ಸ್ಥಳ ಪರಿಶೀಲನೆ ನಡೆಸಲಿದೆ.
ಈ ಹಿನ್ನೆಲೆಯಲ್ಲಿ ಕೃಷಿ, ನೀರಾವರಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಆಹಾರ ವಿತರಣೆ ಹಾಗೂ ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಒಟ್ಟು 10 ಅಧಿಕಾರಿಗಳನ್ನು ಒಳಗೊಂಡ ಕೇಂದ್ರ ತಂಡವನ್ನು ರಚಿಸಲಾಗಿದೆ.
ತಂಡವು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿ, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಎದುರಾಗಿರುವ ಸಂಕಷ್ಟ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮಾಹಿತಿ ಸಂಗ್ರಹಿಸಲಿದೆ. ಪರಿಶೀಲನೆಯ ಬಳಿಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



