ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಲಾಕ್ ಡೌನ್ ನಿಂದಾಗಿ ರಾಜ್ಯಗಳ ಜಿಎಸ್ ಟಿ ಆದಾಯದ ಕೊರತೆಯುಂಟಾಗಿದ್ದು, ಇದನ್ನು ಈ ಕೊರತೆ ಸರಿದೂಗಿಸಲು ವಿಶೇಷ ಅವಕಾಶದಡಿ 1.1 ಲಕ್ಷ ಕೋಟಿ ರೂಪಾಯಿ ಸಾಲ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ.
ಕೇಂದ್ರ ಹಣಕಾಸು ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಜಿಎಸ್ ಟಿ ಅನುದಾನ ಸೆಸ್ ಬಿಡುಗಡೆಯಡಿ ಸಾಲದ ರೂಪದಲ್ಲಿ ರಾಜ್ಯಗಳಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ. ಕೇಂದ್ರ ಸರ್ಕಾರ ಸಾಲ ಪಡೆದ ನಂತರ ಅದು ರಾಜ್ಯದ ಅನುದಾನದಲ್ಲಿ ಕಂಡುಬರುತ್ತದೆ ಎಂದಿದೆ.
ಕೇಂದ್ರದ ಈ ನಿರ್ಧಾರಕ್ಕೆ ಕೆಲ ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿವೆ. ತೆಲಂಗಾಣ ಹಣಕಾಸು ಸಚಿವ ಟಿ ಹರೀಶ್ ರಾವ್, ಇದನ್ನು ಒಪ್ಪಲು ಸಾಧ್ಯವಿಲ್ಲ. ಸಾಲದ ಮೊತ್ತ ರಾಜ್ಯ ಸರ್ಕಾರದ ಖಜಾನೆಯಲ್ಲಿ ತೋರಿಸಲ್ಪಡುವುದರಿಂದ ರಾಜ್ಯ ಸರ್ಕಾರಗಳ ಮೇಲೆ ಹೊರೆಯಾಗುತ್ತದೆ ಎಂದಿದ್ದಾರೆ.
ಆದರೆ ಕೇರಳ ಹಣಕಾಸು ಸಚಿವ ಥಾಮಸ್ ಇಸ್ಸಾಕ್ ಕೇಂದ್ರದ ನಿರ್ಧಾರ ಒಪ್ಪಿದ್ದು, 2023ಕ್ಕೆ ಕೇಂದ್ರ ಸರ್ಕಾರ ಎಷ್ಟು ಜಿಎಸ್ ಟಿ ಪರಿಹಾರ ನೀಡುತ್ತದೆ, ಈ ಬಗ್ಗೆ ಒಮ್ಮತಕ್ಕೆ ಬರಬೇಕು ಎಂದು ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವಾಲಯದ ಈ ನಿರ್ಧಾರಕ್ಕೆ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಕೂಡ ಸಮ್ಮತಿ ನೀಡಿದ್ದು, ಕೇಂದ್ರ ಸರ್ಕಾರ 1.1 ಲಕ್ಷ ಕೋಟಿ ರೂಪಾಯಿ ಸಾಲ ಪಡೆದು ರಾಜ್ಯಗಳಿಗೆ ಒಂದಾದ ಬಳಿಕ ಒಂದರಂತೆ ಸಾಲಗಳನ್ನು ನೀಡಿದರೆ ನಾನು ಇದನ್ನು ಒಪ್ಪುತ್ತೇನೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ