Karnataka NewsNational

*ಸೆಕ್ಯೂರಿಟಿ ಲ್ಯಾಪ್ಸ್ ಆಗಿದೆ ಎಂದು ಕೇಂದ್ರ ಒಪ್ಪಿಕೊಂಡಿದೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ* 

ಪ್ರಗತಿವಾಹಿನಿ ಸುದ್ದಿ: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ಸ್ವತಃ ಕೇಂದ್ರ ಸರ್ಕಾರವೇ ಇದು ಸೆಕ್ಯೂರಿಟಿ ಲ್ಯಾಪ್ಸ್ ಎಂದು ಒಪ್ಪಿಕೊಂಡಿದೆ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಉಗ್ರರ ದಾಳಿ ಬಗ್ಗೆ ಸರ್ವ ಪಕ್ಷದ ಸಭೆಯಲ್ಲಿ ಸೆಕ್ಯೂರಿಟಿ ಲ್ಯಾಪ್ಸ್ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಹೇಳಿದ್ದಾರೆ. ಸಭೆಯಲ್ಲಿ ನಾವು ಅಮಿತ್ ಶಾ ಅವರಿಗೆ ಹೇಳಿದ್ದೇವೆ… ಇದನ್ನು ಚಾಲೆಂಜ್ ಆಗಿ ತೆಗೆದುಕೊಳ್ಳಬೇಕು. ಎಲ್ಲವನ್ನೂ ವ್ಯವಸ್ಥೆ ಮಾಡಬೇಕಿತ್ತು, ನೀವು ವ್ಯವಸ್ಥೆ ಮಾಡದೆ ಇರುವುದರಿಂದಲೇ ಈ ಸ್ಥಿತಿಗೆ ಬಂದಿರೋದು. ಆಗ ಇನ್ಮುಂದೆ ಈ ರೀತಿ ಆಗೋದಿಲ್ಲ ಅಂತ ಅಮಿತ್ ಶಾ ತಿಳಿಸಿದ್ದಾರೆ ಎಂದರು.

Related Articles

ಮೂರು ಹಂತಗಳ ಸೆಕ್ಯೂರಿಟಿ ಇದ್ದರೂ ಕೂಡ ಇಷ್ಟು ಜನರಿಗೆ ರಕ್ಷಣೆ ಕೊಡಲು ಆಗಲಿಲ್ಲ. ಏನೇ ಆದರೂ ಕೂಡ ದೇಶದ ದೃಷ್ಟಿಯಿಂದ ದೇಶದ ಒಗ್ಗಟ್ಟಿನ ದೃಷ್ಟಿಯಿಂದ ನಾವೆಲ್ಲರೂ ಒಂದಾಗಿ ರಕ್ಷಣೆ ಮಾಡೋಣ ಅಂತ ತಿಳಿಸಿದ್ದೇವೆ. ಸರ್ಕಾರದ ನಿರ್ಣಯಕ್ಕೆ ನಾವು ಕೂಡ ಬೆಂಬಲ ಸೂಚಿಸುತ್ತೇವೆ ಅಂತ ತಿಳಿಸಿದೇವೆ ಎಂದರು.

Home add -Advt

Related Articles

Back to top button