National

*ಸೇನೆಯ ಕಾರ್ಯಾಚರಣೆ ನೇರಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಕೇಂದ್ರ ಸೂಚನೆ*

ಪ್ರಗತಿವಾಹಿನಿ ಸುದ್ದಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಜನರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸದ್ಯ ಜಮ್ಮು -ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕುವ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ತೊಡಗಿದೆ. ಈ ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲನಗಳನ್ನು ನೇರಪ್ರಸಾರ ಮಾಡಬೇದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ರಾಷ್ಟ್ರೀಯ ಭದ್ರತೆ ಹಿತಾಸಕ್ತಿಯಲ್ಲಿ ಸೋಷಿಯಲ್‌ ಮೀಡಿಯಾಗಳು ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲನಗಳ ನೇರಪ್ರಸಾರ ಮಾಡಬಾರದು ಎಂದು ಸಲಹೆ ನೀಡಿದೆ.

Home add -Advt

ವರದಿ ಮಾಡುವಾಗ ಅಸ್ತಿತ್ವದಲ್ಲಿನ ಕಾನೂನು, ನಿಬಂಧನೆಗಳಿಗೆ ಬದ್ಧವಾಗಿರಬೇಕು. ರಕ್ಷಣಾ ಕಾರ್ಯಾಚರಣೆಗಳು ಮತ್ತು ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರವನ್ನು ಮಾಡದಂತೆ ಎಲ್ಲಾ ಮಾಧ್ಯಮ ಚಾನೆಲ್ ಗಳಿಗೆ ಸಲಹೆ ನೀಡಿದೆ.

Related Articles

Back to top button