Belagavi NewsBelgaum NewsLife Style

*ಸಿರಿಧಾನ್ಯ, ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ- 2023 ರ ಅಂಗವಾಗಿ ಡಿ.07 ರಂದು ಜಿಲ್ಲೆಗಳಲ್ಲಿ ಸಿರಿಧಾನ್ಯ & ಮರೆತುಹೋದ ಖಾದ್ಯಗಳ (Land races products) ಪಾಕ ಸ್ಪರ್ಧೆಯನ್ನು ಜಂಟಿ ಕೃಷಿ ನಿರ್ದೇಶಕರ ಕಛೇಯ ಕೆ.ಎಸ್.ಎಸ್.ಸಿ ಸಭಾಂಗಣದಲ್ಲಿ ಏರ್ಪಡಿಸಲಿದ್ದು, ಸಾರ್ವಜನಿಕರು ಭಾಗವಹಿಸಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ.

ಆಸಕ್ತರು ಜಂಟಿ ಕೃಷಿ ನಿರ್ದೇಶಕರ ಕಚೇರಿ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ರೈತ ಸಂಪರ್ಕ ಕೇಂದ್ರಯಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಪಡೆದು, ಭರ್ತಿಮಾಡಿ ಡಿ.6 ರ ಮಧ್ಯಾಹ್ನ 1 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ವಿ. ಎಸ್. ಕುಲಕರ್ಣಿ ಸ.ಕೃ.ನಿ(ರೈ.ಮ) ದೂರವಾಣಿ: 8277934048, ಕೃಷಿ ಅಧಿಕಾರಿ ಚಂದನಾ ಬಿ.ಎಸ್ ದೂ:8310730951, ಡಿ.ಇ.ಒ ಲಕ್ಷ್ಮೀ ಕುಂಬಾರ ದೂ:7411809827 ಇವರಿಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button