Latest

ಸಿಇಟಿ ಪರೀಕ್ಷೆ  ದಿನಾಂಕ ನಿಗದಿ; ಇಲ್ಲಿದೆ ವೇಳಾಪಟ್ಟಿ ವಿವರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – 

ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ  ಜೂನ್ 16, 17, 18ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17ರಂದು ಬೆಳಗ್ಗೆ ಭೌತಶಾಸ್ತ್ರ, ಮಧ್ಯಾಹ್ನ ರಸಾಯನಶಾಸ್ತ್ರ, 18ರಂದು ಹೊರನಾಡು ಗಡಿನಾಡು ಕನ್ನಡಿಗರಿಗೆ ಪರೀಕ್ಷೆಗಳು ನಡೆಯಲಿವೆ.

ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಸಿಇಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಏ.22ರವರೆಗೆ ಅವಕಾಶವಿದೆ.

ಅರ್ಜಿಯಲ್ಲೇನಾದರೂ ಮಾಹಿತಿಯನ್ನು ಪರಿಷ್ಕರಿಸುವುದಿದ್ದರೆ ಅಂಥವರಿಗೆ ಮೇ 2ರಿಂದ 6ವರೆಗೆ ಕಾಲಾವಕಾಶ ಇರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

ಬೆಳಗಾವಿ: ನಕಲಿ ವಿದ್ಯಾರ್ಥಿಗಳ ಬಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button