EducationKarnataka News

*ಜನಿವಾರ ತೆಗೆಯದ್ದಕ್ಕೆ ಸಿಇಟಿ ಕೇಂದ್ರದಿಂದ ಹೊರ ಕಳುಹಿಸಿದ ಪ್ರಕರಣ: ವಿದ್ಯಾರ್ಥಿಗೆ ಫ್ರೀ ಸೀಟ್ ಕೊಡುವುದಾಗಿ ಸಚಿವ ಖಂಡ್ರೆ ಭರವಸೆ*

ಪ್ರಗತಿವಾಹಿನಿ ಸುದ್ದಿ: ಜನಿವಾರ ತೆಗೆಯದ್ದಕ್ಕೆ ಸಿಇಟಿ ಪರೀಕ್ಷಾ ಕೇಂದ್ರದಿಂದ ವಿದ್ಯಾರ್ಥಿಯನ್ನು ಹೊರ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವಂಚಿತ ವಿದ್ಯಾರ್ಥಿಗೆ ಫ್ರೀ ಸೀಟ್ ಕೊಡುವುದಾಗಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಬೀದರ್ ನ ಸುಚಿವೃತ ಕುಲಕರ್ಣಿ ಎಂಬ ವಿದ್ಯಾರ್ಥಿ ಜನಿವಾರ ತೆಗೆಯದ್ದಕ್ಕೆ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಬಿಡದೇ ಪರೀಕ್ಷಾ ಕೇಂದ್ರದಿಂದಲೇ ಹೊರ ಕಳುಹಿಸಿದ್ದ ಘಟನೆ ನಡೆದಿತ್ತು. ಘಟನೆಯನ್ನು ತೀವ್ರವಾಗಿ ಖಂಡಿಸಿದ್ದ ಬ್ರಾಹ್ಮಣ ಮಹಾಸಭಾ, ವಿಪ್ರ ಸಂಘಟನೆಗಳು ವಿದ್ಯಾರ್ಥಿ ಭವಿಷ್ಯದ ಪ್ರಶ್ನೆ, ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಪ್ರಕರಣದ ಬಗ್ಗೆ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದರು.

ಘಟನೆ ನಡೆದಿರುವುದು ಖಚಿತಪಟ್ಟ ಹಿನ್ನೆಲೆಯಲ್ಲಿ ಸಚಿವ ಈಶ್ವರ ಖಂಡ್ರೆ ವಿದ್ಯಾರ್ಥಿ ಸುಚಿವೃತ ಕುಲಕರ್ಣಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಬೀದರ್ ನ ಓಲ್ಡ್ ಸಿಟಿಯಲ್ಲಿರುವ ಸುಚಿವೃತ ಕುಲಕರ್ಣಿ ನಿವಾಸಕ್ಕೆ ಭೇತಿ ನೀಡಿದ ಸಚಿವ ಖಂಡ್ರೆ, ವಿದ್ಯಾರ್ಥಿಗೆ ಭೀಮಣ್ಣ ಖಂಡ್ರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟ್ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಅಲ್ಲದೇ ವಿದ್ಯಾರ್ಥಿ ಸುಚಿವೃತ ಕಾಮೆಡ್ ಕೆ ಪರೀಕ್ಷೆಗೆ ಹಾಜರಾಗಬಹುದು ಎಂದು ತಿಳಿಸಿದ್ದಾರೆ. ರಾಅಜ್ಯ ಸರ್ಕಾರ ವಿದ್ಯಾರ್ಥಿಗಳ ಪರವಿದೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button