Latest

ಸಿಇಟಿ ಪರಿಕ್ಷಾ ಫಲಿತಾಂಶ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಹುನಿರೀಕ್ಷಿತ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಡಿಸಿಎಂ ಅಶ್ವತ್ಥ ನಾರಾಯಣ ಇಂದು ಸಿಇಟಿ ಫಲಿತಾಂಶ ಪ್ರಕಟಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಅಶ್ವತ್ಥ ನಾರಾಯಣ್, ಸಿಇಟಿ ಫಲಿತಾಂಶ ಪ್ರಕಟಿಸಿದರು. kea.kar.nic.in, karresults.nic.in ನಲ್ಲೂ ಫಲಿತಾಂಶ ಲಭ್ಯವಾಗಲಿದೆ ಎಂದರು. ಅಕ್ಟೋಬರ್ ನಲ್ಲಿ ಆನ್ ಲೈನ್ ನಲ್ಲಿ ಕೌನ್ಸಲಿಂಗ್ ನಡೆಯಲಿದ್ದು, ಎರಡು ಬಾರಿ ಕೌನ್ಸಲಿಂಗ್ ನಡೆಯಲಿದೆ ಎಂದರು.

ಸಾಮಾನ್ಯವಾಗಿ 25 ದಿನಗಳಲ್ಲಿ ಫಲಿತಾಂಶ ಪ್ರಕಟವಾಗುತ್ತಿತ್ತು. ಈ ಬಾರಿ 21 ದಿನಗಳಿಗೆಲ್ಲಾ ಫಲಿತಾಂಶ ಪ್ರಕಟಿಸಲಾಗಿದೆ. ಕೊರೊನಾ ಸೋಂಕಿತ 63 ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು.

ಈ ಬಾರಿ 1,94,419 ಅಭ್ಯರ್ಥಿಗಳು ಸಿಇಟಿ ನೋಂದಣಿ ಮಾಡಿದ್ದರು. ಅವರಲ್ಲಿ 1,84,368 ಜನರು ಪರೀಕ್ಷೆ ಬರೆಯಲು ಕುಳಿತಿದ್ದರು. ಈ ಪೈಕಿ 1800 ವಿದ್ಯಾರ್ಥಿಗಳು ಹೊರ ರಾಜ್ಯದವರೇ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 497 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು ಎಂದರು.

ಇಂಜಿನಿಯರಿಂಗ್ ಟಾಪ್ 3 ರ್ಯಾಂಕ್ :
ರಕ್ಷಿತ್ ಎಂ, ಆರ್ ವಿ ಕಾಲೇಜು, ಬೆಂಗಳೂರು
ಶುಭಾನ್ ಆರ್ – ಶ್ರೀ ಚೈತನ್ಯ ಇ ಟೆಕ್ನೋ ಶಾಲೆ, ಬೆಂಗಳೂರು
ಎಂ ಶಶಾಂಕ್ ಬಾಲಾಜಿ, ಬೇಸ್ ಪಿಯು ಕಾಲೇಜು, ಹುಬ್ಬಳ್ಳಿ

ಬಿ ಎಸ್ಸಿ ಅಗ್ರಿ:
ವರುಣ್ ಗೌಡ ಎ ಬಿ, ಎಕ್ಸ್ ಪರ್ಟ್ ಕಾಲೇಜು, ಮಂಗಳೂರು
ಸಂಜನಾ ಕೆ, ಬೇಸ್ ಪಿಯು ಕಾಲೇಜು, ಮೈಸೂರು
ಲೋಕೇಶ್ ವಿ ಜೋಗಿ ಶ್ರೀ ರಾಮಕೃಷ್ಣ ವಿದ್ಯಾಶಾಲಾ ಪಿಯು ಕಾಲೇಜು, ಮೈಸೂರು

ಪಶುವೈದ್ಯಕೀಯ:

ಸಾಯಿ ವಿವೇಕ್ ಪಿ, ನಾರಾಯಣ ಇ ಟೆಕ್ನೋ ಶಾಲೆ, ಬೆಂಗಳೂರು
ಆರ್ಯನ್ ಮಹಲಿಂಗಪ್ಪ ಚನ್ನಾಳ್, ಪ್ರಗತಿ ಪಬ್ಲಿಕ್ ಸೆಕೆಂಡರಿ ಶಾಲೆ, ಕೋಟ
ಸಂಜನಾ ಕೆ, ಬೇಸ್ ಪಿಯು ಕಾಲೇಜು, ಮೈಸೂರು

ಬಿ ಫಾರ್ಮಾ, ಡಿ ಫಾರ್ಮಾ :
ಸಂದೀಪನ್ ನಸ್ಕರ್, ಹೊರನಾಡ ಕನ್ನಡಿಗ
ಪವನ್ ಎಸ್ ಗೌಡ, ನಾರಾಯಣ ಪಿಯು ಕಾಲೇಜು, ಬೆಂಗಳೂರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button